ಸುಂಟಿಕೊಪ್ಪದಲ್ಲಿ ಪೊಲೀಸ್ ಇಲಾಖೆಯಿಂದ ಬಾಲ ಕಾರ್ಮಿಕರ ಪತ್ತೆ ಕಾರ್ಯಾಚರಣೆ
admincoorgdaily

ಸುಂಟಿಕೊಪ್ಪ :ಪೊಲೀಸ್ ಠಾಣೆಯ ಪಿಎಸ್ಐ ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಬಾಲ ಕಾರ್ಮಿಕರ ಪತ್ತೆ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದರಿಂದ ಉಂಟಾಗುವ ಕಾನೂನು ಪರಿಣಾಮಗಳ ಕುರಿತು ವಿವಿಧ ಅಂಗಡಿ ಹಾಗೂ ಸಂಸ್ಥೆಗಳ ಮಾಲೀಕರಿಗೆ ಕಾನೂನು ಅರಿವು ಮೂಡಿಸಿದರು.
ಈ ಸಂದರ್ಭ, ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಸಹಕರಿಸುವಂತೆ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು.