ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ ಮತ್ತು ಕಾನೂನು ಅರಿವು
admincoorgdaily

ಮಡಿಕೇರಿ:
ಮಡಿಕೇರಿ ನಗರ ವ್ಯಾಪ್ತಿಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಾದ ಹೋಟೆಲ್, ದಿನಸಿ ಅಂಗಡಿ, ಕಾಫಿ–ಟೀ ಕ್ಯಾಂಟೀನ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಇಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಕುರಿತು ತಪಾಸಣೆ ನಡೆಸಲಾಯಿತು.
ತಪಾಸಣೆ ಸಂದರ್ಭದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಹಾಗೂ ತಿದ್ದುಪಡಿ ಕಾಯ್ದೆ, 2016ರ ಕುರಿತು ಅಂಗಡಿ, ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಕಾನೂನು ಅರಿವು ಮೂಡಿಸಲಾಯಿತು.
ಕಾಯ್ದೆಯ ಪ್ರಮುಖ ಅಂಶಗಳನ್ನು ಒಳಗೊಂಡ ಬಿತ್ತಿಪತ್ರಗಳನ್ನು ವಿತರಿಸಿ, ಮಾಲೀಕರಿಂದ ಸ್ವಯಂ ಘೋಷಣಾ ಪತ್ರಗಳನ್ನು ಪಡೆಯುವ ಮೂಲಕ ತಮ್ಮ ಸಂಸ್ಥೆಗಳಲ್ಲಿ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳದಂತೆ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸುವಂತೆ ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನಾ) ಕಾಯ್ದೆ, 1976, ಬಾಲ್ಯ ವಿವಾಹ ನಿಷೇಧ ಕಾಯ್ದೆ, 2006 ಹಾಗೂ ಪೋಕ್ಸೋ ಕಾಯ್ದೆ, 2012ರ ಕುರಿತು ಸಾರ್ವಜನಿಕರು ಮತ್ತು ಮಾಲೀಕರಿಗೆ ಕಾನೂನು ಅರಿವು ನೀಡಲಾಯಿತು.
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಬಳಸಿಕೊಳ್ಳಬೇಕಾದ ಸಹಾಯವಾಣಿ ಸಂಖ್ಯೆಗಳಾದ 112 – ತುರ್ತು ಸಹಾಯವಾಣಿ, 1098 – ಮಕ್ಕಳ ಸಹಾಯವಾಣಿ, 181 – ಮಹಿಳಾ ಸಹಾಯವಾಣಿ ಹಾಗೂ 1930 – ಸೈಬರ್ ಅಪರಾಧ ಸಹಾಯವಾಣಿಗಳ ಕುರಿತು ಮಾಹಿತಿ ನೀಡಿ, ಅಗತ್ಯ ಸಂದರ್ಭದಲ್ಲಿ ಸಹಾಯವಾಣಿಗಳನ್ನು ಬಳಸಿಕೊಳ್ಳುವಂತೆ ತಿಳಿಸಲಾಯಿತು. ಈ ಸಂದರ್ಭದಲ್ಲಿ
ಶ್ರೀ ಎಂ.ಎಂ. ಯತ್ನಟ್ಟಿ, ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ ಹಾಗೂ ಕಾರ್ಮಿಕ ಅಧಿಕಾರಿ (ಪ್ರಭಾರ), ಕೊಡಗು ಉಪವಿಭಾಗ, ಮಡಿಕೇರಿ, ಶ್ರೀ ಆರ್. ಶಿರಾಜ್ ಅಹಮದ್, ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕೊಡಗು, ರಕ್ಷಿತ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.*