ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ
admincoorgdaily

ನಾಪೋಕ್ಲು :ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೇ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಶಾಲೆಯ ಶಿಕ್ಷಕ ಸುನಿಲ್ ಅವರು ದಿನದ ಮಹತ್ವದ ಕುರಿತು ಮಾತನಾಡಿದರು. ಶಿಕ್ಷಕ ಕಿರಣ್ ಅವರು ಹಾಡು ಹೇಳುವ ಮೂಲಕ ಮಕ್ಕಳನ್ನು ರಂಜಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಗಮನ ಸೆಳೆಯಿತು.
ಈ ಸಂದರ್ಭ ಶಾಲೆಯ ಆಡಳಿತ ಮಂಡಳಿ, ಶಾಲೆಯ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.