ಮಕ್ಕಳ ದಿನಾಚರಣೆ - ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಿದ ಶಾಸಕ ಎ.ಎಸ್. ಪೊನ್ನಣ್ಣ
admincoorgdaily

ವಿರಾಜಪೇಟೆ: ಮಕ್ಕಳ ದಿನಾಚರಣೆಯ ಅಂಗವಾಗಿ ಎ.ಎಸ್. ಪೊನ್ನಣ್ಣ ಅಭಿಮಾನಿಗಳ ಬಳಗ, ವಿರಾಜಪೇಟೆ ಇವರ ವತಿಯಿಂದ ಆಯೋಜಿಸಲಾಗಿದ್ದ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ಹಾಗೂ ಟಿಫನ್ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಪುರಸಭೆಯ ನಿಕಟಪೂರ್ವ ಸದಸ್ಯರಾದ ರಾಜೇಶ್ ಪದ್ಮನಾಭ, ಮೊಹಮ್ಮದ್ ರಾಫಿ, ಜಲೀಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ನಸೀರ್, ಕಾರ್ಯಕ್ರಮ ಆಯೋಜಕರಾದ ಅಫ್ತಾಬ್, ಮಹಮ್ಮದ್ ನಯಾಜ್, ಪ್ರಮುಖರಾದ ನಿಸರ್, ಕಾಳಮಾಡ ಜಗತ್ ಸೇರಿದಂತೆ ಹಲವು ಪ್ರಮುಖರು ಇದ್ದರು.