Kodagu

ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ ; ಶಾಸಕ ಎಎಸ್ ಪೊನ್ನಣ್ಣ

admincoorgdaily

ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ ; ಶಾಸಕ ಎಎಸ್ ಪೊನ್ನಣ್ಣ
ಸಿದ್ದಾಪುರ:-
ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಾರ್ಯಾಲಯ, ಸಿದ್ದಾಪುರ ಹಾಗೂ ಸ್ವಚ್ಛ ಸಿದ್ದಾಪುರ ಸಮಿತಿಯ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಶುದ್ಧ ಕೊಡಗು–ಹಸಿರು ಕೊಡಗು ಎಂಬ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲೂ ಸದಾ ಇರಬೇಕು. ಪ್ರತಿಯೊಬ್ಬ ನಾಗರಿಕರು ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಿ, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಕೈಜೋಡಿಸಿದಾಗ ಮಾತ್ರ ಕೊಡಗನ್ನು ಸುಂದರ ಹಾಗೂ ಸ್ವಚ್ಛ ಜಿಲ್ಲೆಯನ್ನಾಗಿ ರೂಪಿಸಲು ಸಾಧ್ಯ ಎಂದರು
ಬಾಲ್ಯದಿಂದಲೇ ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದು ಅತ್ಯಂತ ಅಗತ್ಯ ಈ ನಿಟ್ಟಿನಲ್ಲಿ ಪೋಷಕರು ಹಾಗೂ ಹಿರಿಯರು ಮಕ್ಕಳಿಗೆ ಸ್ವಚ್ಛತೆಯ ಮಹತ್ವವನ್ನು ತಿಳಿಸಿಕೊಡುವುದರ ಜೊತೆಗೆ ತಾವೂ ಸ್ವಚ್ಛತಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬರ ಕರ್ತವ್ಯವೂ ಆಗಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಇಮ್ಯಾನುಯೆಲ್ ಥಾಮಸ್ ರಾಮಪುರಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ. ಜಾನ್ಸನ್, ವಲಯ ಅಧ್ಯಕ್ಷ ಪ್ರತೀಶ್ ಸೇರಿದಂತೆ ಹಲವು ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.