Kodagu

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

admincoorgdaily

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ
ಮಡಿಕೇರಿ : ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡವ ಜನಾಂಗಕ್ಕೆ ಪ್ರತ್ಯೇಕ ಗುರುತಿನ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಗೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವ ಪ್ರದೇಶದಾದ್ಯಂತ ಹಮ್ಮಿಕೊಂಡಿರುವ ಶಾಂತಿಯುತ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ 9ನೇ ಸರಣಿ ನ.11 ರಂದು ಬೆಳಿಗ್ಗೆ 10.30 ಗಂಟೆಗೆ ಕಡಿಯತ್ನಾಡ್-ಬೆಪ್ಪುನಾಡ್ ನಡುವಿನ ಕಡಂಗದಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಕೊಡವ ಜನಾಂಗದ ಅಸ್ತಿತ್ವ, ಗುರುತು, ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ ಹಾಗೂ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯದ ರಕ್ಷಣೆಗಾಗಿ ಈ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.