ಚೆಯ್ಯಂಡಾಣೆ; ನ. 2ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಹಾಗೂ ಕ್ರಿಕೆಟ್ ಪಂದ್ಯಾಟ
admincoorgdaily

ನಾಪೋಕ್ಲು :ಕನ್ನಡ ರಾಜ್ಯೋತ್ಸವದ ಅಂಗವಾಗಿ ಚೆಯ್ಯಂಡಾಣೆ ಕನ್ನಡ ರಾಜ್ಯೋತ್ಸವ ಕ್ರೀಡಾ ಸಮಿತಿಯ ವತಿಯಿಂದ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಇದರ ಅಂಗವಾಗಿ ನ.2ರಂದು ನರಿಯಂದಡ, ಕೊಕೇರಿ, ಚೇಲಾವರ ಗ್ರಾಮಸ್ಥರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಹಾಗೂ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ನರಿಯಂದಡ ಕೇಂದ್ರ ಪ್ರೌಢಶಾಲೆಯ ಮೈದಾನದಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಆರಂಭವಾಗಲಿದ್ದು,0.22 ಎಂಎಂ ಹಾಗೂ 12 ಬೋರ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.
ಸ್ಪರ್ಧೆಯಲ್ಲಿ ಭಾಗವಹಿಸುವವರು ರೂ.200 ಪ್ರವೇಶ ಶುಲ್ಕ ಪಾವತಿಸಬೇಕಾಗಿದೆ.
ಮಧ್ಯಾಹ್ನ 2 ಗಂಟೆಗೆ ಗ್ರಾಮಸ್ಥರಿಗಾಗಿ ಕ್ರಿಕೆಟ್ ಪಂದ್ಯಾಟವನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಆಯೋಜಿಸಲಾಗಿದೆ.
ಮೊದಲ ಪಂದ್ಯದಲ್ಲಿ ನರಿಯಂದಡ ಹಾಗೂ ಚೇಲಾವರ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ವಿಜೇತರಾದ ತಂಡವು ಫೈನಲ್ ಪಂದ್ಯದಲ್ಲಿ ಕೋಕೇರಿ ತಂಡವನ್ನು ಎದುರಿಸಲಿದೆ.
ಕ್ರೀಡಾಕೂಟದ ಮೂಲಕ ಗ್ರಾಮಸ್ಥರಲ್ಲಿ ಕ್ರೀಡಾಸಕ್ತಿ ಹಾಗೂ ಪರಸ್ಪರ ಸೌಹಾರ್ದವನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ರಾಜ್ಯೋತ್ಸವ ಕ್ರೀಡಾಕೂಟ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ :ಝಕರಿಯ ನಾಪೋಕ್ಲು