ಉಸ್ತುವಾರಿ ಸಚಿವ ಭೋಸರಾಜು ಅವರಿಗೆ ಅಭಿನಂದನೆ ಸಮರ್ಪಣೆ

ಮಡಿಕೇರಿ:ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಎರಡು ವರ್ಷದಲ್ಲಿ ಅತಿಹೆಚ್ಚು ಬಾರಿ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಭೋಸರಾಜ್ ರವರಿಗೆ ಕೊಡಗಿನ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಮತ್ತು ಡಾ ಮಂತರ್ ಗೌಡ ರವರು ಅಭಿನಂದನೆ ಸಮರ್ಪಿಸಿದರು.
ಜಿಲ್ಲೆಯ ಬಗ್ಗೆ ಮತ್ತು ಜಿಲ್ಲೆಯ ಜನತೆ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಸಚಿವ ಭೋಸರಾಜ್ ರವರು ಪರಿಣಾಮಕಾರಿಯಾಗಿ ಕೆಡಿಪಿ ಸಭೆಗಳು ಜನಸ್ಪಂದನೆ ಸಭೆಗಳನ್ನು ನಡೆಸಿ ಅಭಿವೃದ್ಧಿ ಗೆ ಸಹಕಾರ ನೀಡಿದ್ದಲ್ಲದೆ ತಮ್ಮ ಇಲಾಖೆಯಿಂದ ಎರಡು ವಿಧಾನ ಸಭಾ ಕ್ಷೇತ್ರಗಳಿಗೆ 50 ಕೋಟಿ ರೂ ಅನುದಾನ ನೀಡುವ ಮೂಲಕ ಕೊಡಗಿಗೆ ಆದ್ಯತೆ ನೀಡಿದ್ದಾರೆ ಎಂದು ಶಾಸಕರದ್ವಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ,ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಶಾಂತೆಯಂಡ ವೀಣಾ ಅಚ್ಚಯ್ಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಉಪಸ್ಥಿತರಿದ್ದರು.