SIR ವಿರುದ್ಧ ಗೋಣಿಕೊಪ್ಪಲಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ಮತದಾರರ ಹಕ್ಕು ಕಸಿಯುವ ಷಡ್ಯಂತ್ರ: ಶಾಸಕ ಪೊನ್ನಣ್ಣ ಆಕ್ರೋಶ
admincoorgdaily

ಗೋಣಿಕೊಪ್ಪಲು, ನ. 5:ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ SIR - ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ವಿರೋಧಿಸಿದರು.
SIR ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ನಿಜವಾದ ಮತದಾರರನ್ನು ಕೈಬಿಡುವ ಷಡ್ಯಂತ್ರ ನಡೆಯುತ್ತಿದೆ. ಬಡವರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರ ಮತದಾನದ ಹಕ್ಕು ಕಸಿಯಲು ಕೇಂದ್ರ ಸರ್ಕಾರ ಹೊರಟಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ದೊಡ್ಡ ದ್ರೋಹ. ಜನರ ಮತದಾನದ ಹಕ್ಕು ರಕ್ಷಿಸಲು ನಾವು ಬೀದಿಗಿಳಿದು ಹೋರಾಡುತ್ತೇವೆ ಎಂದು ಶಾಸಕರು ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಸೇರಿ ಕಾಂಗ್ರೆಸ್ ಧ್ವಜ ಹಿಡಿದು _"SIR ವಾಪಸ್ ಪಡೆಯಿರಿ", "ಮತದಾರರ ಹಕ್ಕು ರಕ್ಷಿಸಿ"_ ಎಂದು ಘೋಷಣೆ ಕೂಗಿದರು. ಬಸ್ ನಿಲ್ದಾಣದ ಮುಂಭಾಗದಲ್ಲಿ ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸೌಕತ್ ಆಲಿ, ಎಲ್ಲಾ ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಮಹಿಳಾ ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು, ಪದಾಧಿಕಾರಿಗಳು, ಒಬಿಸಿ ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು, ಪದಾಧಿಕಾರಿಗಳು, ಎಸ್.ಟಿ. ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು, ಪದಾಧಿಕಾರಿಗಳು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು, ಪದಾಧಿಕಾರಿಗಳು, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಯುವ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.