Kodagu

SIR ವಿಚಾರದಲ್ಲಿ ಕಾಂಗ್ರೆಸ್ ದ್ವೇಷ ರಾಜಕಾರಣ: ನಳಿನ್ ಕಟೀಲ್ ಆರೋಪ

admincoorgdaily

SIR ವಿಚಾರದಲ್ಲಿ ಕಾಂಗ್ರೆಸ್ ದ್ವೇಷ ರಾಜಕಾರಣ: ನಳಿನ್ ಕಟೀಲ್ ಆರೋಪ
ಮಡಿಕೇರಿ: ರಾಜ್ಯದ ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ನಗರದ ಗಾಂಧಿ ಮೈದಾನದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಸಭೆಯ ನಂತರ ಸೇವಾ ಜ್ಯೋತಿ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆದಿದ್ದು, ಈಗ ಡಿ.ಕೆ.ಶಿವಕುಮಾರ್ ಸಿಎಂ ಆದ ಬಳಿಕ ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಾಗುತ್ತಿದೆ. ರಾಜ್ಯದಲ್ಲಿ ಕಾರ್ಯಕರ್ತರು, ಪತ್ರಕರ್ತರು, ಶಾಸಕರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದರು.
ಯಾತ್ರೆಯಲ್ಲಿ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಸುಜಾ ಕುಶಾಲಪ್ಪ ಇದ್ದರು.