ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
admincoorgdaily
ಮಡಿಕೇರಿ ಸೆ.10 : ಉತ್ತರಖಂಡ್ ರಾಜ್ಯದ ಹಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಮಡಿಕೇರಿ ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ವತಿಯಿಂದ ಸೆ.12 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ.