ಇಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
admincoorgdaily

ಮಡಿಕೇರಿ ಅ.28 : ಮಡಿಕೇರಿ ನಗರಸಭೆಯಲ್ಲಿ ಕಳೆದ ಐದು ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ಅಭಿವೃದ್ಧಿ ಕಾರ್ಯಗಳಲ್ಲಿ ಸಂಪೂರ್ಣ ವೈಫಲ್ಯವನ್ನು ಕಂಡಿದೆ ಎಂದು ಆರೋಪಿಸಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅ.29 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿಯಿಂದ ನಗರಸಭೆ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ರಸ್ತೆಗಳ ಅಭಿವೃದ್ಧಿ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಆಡಳಿತ ಕಳೆದ ಐದು ವರ್ಷಗಳಲ್ಲಿ ಶೂನ್ಯ ಸಾಧನೆ ಮಾಡಿದ್ದು, ನಗರದ ಜನತೆ ಬೇಸತ್ತು ಹೋಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.