ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ
admincoorgdaily

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಇಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನದ ಪೀಠಿಕೆಗೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ವಾಚಿಸುವ ಮೂಲಕ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ, ಅಪರ ಜಿಲ್ಲಾಧಿಕಾರಿ ಜಯಲಕ್ಷ್ಮಿ, ಯುವಜನ ಸಮನ್ವಯಾಧಿಕಾರಿ ಭಾಗೀರಥಿ, ಮಡಿಕೇರಿ ತಾಲೂಕು ತಹಶೀಲ್ದಾರ್ ಶ್ರೀಧರ್, ಕುಶಾಲನಗರ ತಾಲೂಕು ತಹಶೀಲ್ದಾರ್ ರಮೇಶ್ ಬಾಬು ಹಾಗೂ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ ಸೇರಿದಂತೆ ಇತರರು ಇದ್ದರು.
ಗಾಯತ್ರಿ ಅವರು ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಲಾಯಿತು.