ಸಂಪಾಜೆಯಲ್ಲಿ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣ: 60 ಮರಗಳ ತೆರವಿಗೆ ಆಕ್ಷೇಪಣೆ ಆಹ್ವಾನ
admincoorgdaily

ಮಡಿಕೇರಿ:-ಮಡಿಕೇರಿ ತಾಲ್ಲೂಕು ಸಂಪಾಜೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಸ್ಥಳದಲ್ಲಿರುವ ಮರಗಳನ್ನು ಕಡಿದು ತೆರವುಗೊಳಿಸುವ ಕುರಿತು ಈ ಕಾಮಗಾರಿ ಅಡಚಣೆಯಾದ 60 ಮರಗಳನ್ನು ಅರಣ್ಯ ಇಲಾಖಾ ವತಿಯಿಂದ ಕಡಿದು ಸರ್ಕಾರಿ ಮರ ಸಂಗ್ರಹಾಲಯಕ್ಕೆ ಸಾಗಿಸಲು ಕೋರಿರುತ್ತಾರೆ.
ಆದ್ದರಿಂದ ಸಾರ್ವಜನಿಕರು ಈ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಅಕ್ಟೋಬರ್, 03 ರೊಳಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ವಿಭಾಗ, ಮಡಿಕೇರಿ ಇವರಿಗೆ ಸಲ್ಲಿಸಬೇಕಾಗಿ ತಿಳಿಸಿದೆ. ನಿಗಧಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಬಾರದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.