ಸೋಮವಾರಪೇಟೆ ಎಸ್‌ಬಿಐ ಎಟಿಎಂಗೆ ನುಗ್ಗಿದ ಖದೀಮರು: ಸಿಸಿ ಕ್ಯಾಮರಾದಲ್ಲಿ ಸೆರೆ
admincoorgdaily

ಸೋಮವಾರಪೇಟೆ, ಸೆ. 5: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ನ ಎಟಿಎಂಗೆ ಖದೀಮರ ತಂಡವೊಂದು ಶುಕ್ರವಾರ ತಡರಾತ್ರಿ ದರೋಡೆಗೆ ಯತ್ನಿಸಿದೆ.
ರಾತ್ರಿ 2.05ರ ಸುಮಾರಿಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಕಬ್ಬಿಣದ ಸಲಾಕೆಯಿಂದ ಎಟಿಎಂ ಕವಚವನ್ನು ಕಳಚಿ ಹಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ಯಾರೋ ಬರುತ್ತಿರುವಂತೆ ಭಾಸವಾದ ಹಿನ್ನೆಲೆಯಲ್ಲಿ ಕೃತ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಿ ಪರಾರಿಯಾಗಿದ್ದಾರೆ.
ಇಡೀ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.