ಮಡಿಕೇರಿಯಲ್ಲಿ ಶಾಸಕ ಮಂತರ್ ಗೌಡ ಫ್ಲೆಕ್ಸ್ ಗೆ ಹಾನಿ; ವಿ.ಜಿ. ಮೋಹನ್ ಖಂಡನೆ
admincoorgdaily

ಮಡಿಕೇರಿ: ನಗರದಲ್ಲಿ ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಫ್ಲೆಕ್ಸನ್ನು ಹರಿದು ಹಾನಿಗೊಳಿಸಿರುವ ಘಟನೆಗೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ.ಜಿ. ಮೋಹನ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,
ಇಂತಹ ಕೃತ್ಯಗಳ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುವವರನ್ನು ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.