ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಗೆ ಡಿಸಿಎಂ ಪರಮೇಶ್ವರ್‌ಗೆ ಆಹ್ವಾನ
admincoorgdaily

ಬೆಂಗಳೂರು:ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ, ನ.2 ಹಾಗೂ 3 ರಂದು ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಯ ಉದ್ಘಾಟನೆಗೆ ಆಗಮಿಸುವಂತೆ ಆಹ್ವಾನ ನೀಡಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾಧ್ಯಕ್ಷ ಅನು ಕಾರ್ಯಪ್ಪ, ರಾಜ್ಯ ಸಮಿತಿ ನಿರ್ದೇಶಕಿ ಸವಿತಾ ರೈ, ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ಕಾರ್ಯದರ್ಶಿ ರಿಜ್ವಾನ್ ಹುಸೇನ್, ನಿರ್ದೇಶಕ ಸಂತೋಷ್ ರೈ ಹಾಜರಿದ್ದರು.