Kodagu

ವಿರಾಜಪೇಟೆಯಲ್ಲಿ ₹2.63 ಕೋಟಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

admincoorgdaily

ವಿರಾಜಪೇಟೆಯಲ್ಲಿ ₹2.63 ಕೋಟಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ
ವಿರಾಜಪೇಟೆ: ಪುರಸಭೆ ವ್ಯಾಪ್ತಿಯ ಛತ್ರಕೆರೆಗೆ ₹1 ಕೋಟಿ 31 ಲಕ್ಷ ಮತ್ತು ಗೌರಿಕೆರೆ ಭಾಗಕ್ಕೆ ₹1 ಕೋಟಿ 32 ಲಕ್ಷ ವೆಚ್ಚದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ನೆರವೇರಿಸಿದರು.

ಶಾಸಕರ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಒಟ್ಟು ₹2 ಕೋಟಿ 63 ಲಕ್ಷ ಮೊತ್ತದ ಕಾಮಗಾರಿಗಳನ್ನು ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.

ನಂತರ ಮಾತನಾಡಿದ ಶಾಸಕರು, ಕ್ಷೇತ್ರದ ಮತ್ತು ವಿಶೇಷವಾಗಿ ಈ ಭಾಗಗಳ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತಂದು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಉತ್ತಮ ಕೆಲಸಕ್ಕೆ ಜನರು ಬೆಂಬಲ ನೀಡುತ್ತಿರುವುದು ಸಂತಸ ತಂದಿದೆ. ಕ್ಷೇತ್ರದಾದ್ಯಂತ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿದ್ದು, ಜನರ ಬೆಂಬಲದೊಂದಿಗೆ ಇನ್ನಷ್ಟು ಅನುದಾನ ತಂದು ಜನರ ಆಶೋತ್ತರಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಸುಜಾ ಕುಶಾಲಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರ ಅಧ್ಯಕ್ಷ ಮಾಳೇಟೀರ ಬೋಪಣ್ಣ, ಮಾಜಿ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಳಮಂಡ ನೈನಾ ಜಗತ್, ಪುರಸಭೆ ಮಾಜಿ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಬಗರ್ ಹುಕುಂ ಅಧ್ಯಕ್ಷ ಸಲೀಂ, ಅಲ್ಪಸಂಖ್ಯಾತರ ಅಧ್ಯಕ್ಷ ರಫೀಕ್, ಬ್ಲಾಕ್ ಉಪಾಧ್ಯಕ್ಷ ಜೋಕಿಮ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ಚಂಗಪ್ಪ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.