Kodagu

ಶಿವಕೇರಿ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ಶ್ರದ್ಧಾ-ಭಕ್ತಿಯ ಲಕ್ಷ್ಮಿ ಪೂಜೆ

admincoorgdaily

ಶಿವಕೇರಿ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ಶ್ರದ್ಧಾ-ಭಕ್ತಿಯ ಲಕ್ಷ್ಮಿ ಪೂಜೆ
ವಿರಾಜಪೇಟೆ: ಸ್ಥಳೀಯ ಶಿವಕೇರಿಯ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಲಕ್ಷ್ಮಿ ಪೂಜೆಯು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿತು.
   ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಧನಲಕ್ಷ್ಮಿ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು. ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಿ, ಮಹಾ ಮಂಗಳಾರತಿ ಬೆಳಗಿ ಪ್ರಾರ್ಥಿಸಲಾಯಿತು. ನಾಡಿನ ಸುಭಿಕ್ಷೆ, ಭಕ್ತರ ಕಲ್ಯಾಣ ಹಾಗೂ ಸಮೃದ್ಧಿಗಾಗಿ ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

  ಪೂಜಾ ಕೈಂಕರ್ಯಗಳ ನಂತರ ಆಗಮಿಸಿದ್ದ ಸಮಸ್ತ ಭಕ್ತಾದಿಗಳಿಗೆ ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಶುಭ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿವಕೇರಿ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.