ಧರ್ಮಸ್ಥಳ ಪ್ರಕರಣ:ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ: ಸಿ.ಎಂ ಸಿದ್ದರಾಮಯ್ಯ

ಧರ್ಮಸ್ಥಳ ಪ್ರಕರಣ:ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ: ಸಿ.ಎಂ ಸಿದ್ದರಾಮಯ್ಯ

ಮೈಸೂರು:ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ. ಕಾನೂನು ರೀತಿಯಲ್ಲೇ ಕ್ರಮ ಆಗಲಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿದ ಸಿ.ಎಂ,ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ತನಿಖೆ ನಡೆಸುತ್ತಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪೊಲೀಸ್‌ ಇಲಾಖೆಯೊಂದಿಗೆ ಚರ್ಚಿಸಿ, ಎಸ್‌ಐಟಿ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.