ಅ.07 ರಂದು ನೇರ ಸಂದರ್ಶನ: ಕಲ್ಯಾಣಿ ಮೋಟಾರ್ಸ್ ನಲ್ಲಿ ಉದ್ಯೋಗಾವಕಾಶ
admincoorgdaily

ಮಡಿಕೇರಿ:ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ವಿರಾಜಪೇಟೆ ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ನೆಕ್ಸಾ - ವಿರಾಜಪೇಟೆ, ನಿಸರ್ಗ ಲೇಔಟ್ ಇಲ್ಲಿ ಅಕ್ಟೋಬರ್ 07 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.
ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ
- ರಿಲೇಷನ್‌ಶಿಪ್ ಮ್ಯಾನೇಜರ್
- ಎಸ್‌ಆರ್ ರಿಲೇಷನ್‌ಶಿಪ್ ಮ್ಯಾನೇಜರ್
- ಡ್ರೈವರ್
- ಆಫೀಸ್ ಬಾಯ್
ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿದ್ಯಾರ್ಹತೆ:ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಡಿಪ್ಲೋಮಾ ಹಾಗೂ ಐಟಿಐ
ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್
ದೂ.ಸಂ. 8296020826 ಸಂಪರ್ಕಿಸಬಹುದು.