ಪೌರಕಾರ್ಮಿಕರ ನೇರ ನೇಮಕಾತಿ
admincoorgdaily

ಮಡಿಕೇರಿ:-ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಮಡಿಕೇರಿ ನಗರಸಭೆಯಲ್ಲಿ ಖಾಲಿ ಇರುವ 04 ಪೌರ ಕಾರ್ಮಿಕರ ಹುದ್ದೆಯನ್ನು ನೇರ ನೇಮಕಾತಿ ಮಾಡಬೇಕಿದೆ.
ಹೊಸದಾಗಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕಾಗಿರುವುದರಿಂದ, ವರ್ಗವಾರು ವರ್ಗೀಕರಿಸಿ, ಸರ್ಕಾರದ ಆದೇಶದ ರೀತ್ಯಾ ನೇರ ನೇಮಕಾತಿ ಮಾಡುವ ಸಂಬಂಧ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್, 22 ಕೊನೆಯ ದಿನವಾಗಿದೆ. ಅರ್ಜಿಯನ್ನು ಮಡಿಕೇರಿ ನಗರಸಭೆಯಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಸಲ್ಲಿಸುವುದು. ಪ್ರಸ್ತುತ ನಗರಸಭೆ ಮಡಿಕೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹ ನೇರಪಾವತಿ ಪೌರಕಾರ್ಮಿಕ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಯವರ ಕಾರ್ಯಾಲಯದ ಅಧಿಕೃತ ವೆಬ್‍ಸೈಟ್ www.kodagu.dudc.mrc.gov.in ಹಾಗೂ ಮಡಿಕೇರಿ ನಗರಸಭೆ www.madikericity.mrc.gov.in ಅಧಿಕೃತ ವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಸೇಖರ್ ಅವರು ತಿಳಿಸಿದ್ದಾರೆ.