ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ
admincoorgdaily

ಸೋಮವಾರಪೇಟೆ:ಪ್ರವೀಣ್‌ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಯುವ ಘಟಕ ಹಾಗೂ ಸೋಮವಾರಪೇಟೆ ನಗರ ಘಟಕದ ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಸಂಘಟನೆಯ ಯುವ ಘಟಕದ ಜಿಲ್ಲಾಧ್ಯಕ್ಷ ವಸಂತ್, ನಗರಾಧ್ಯಕ್ಷ ಮಂಜುನಾಥ್, ತಾಲೂಕು ಯುವ ಘಟಕದ ಅಧ್ಯಕ್ಷ ಗಣೇಶ್, ಜಿಲ್ಲಾ ಉಪಾಧ್ಯಕ್ಷ ಶೇಖರ್, ಕರವೇ ವಿವಿಧ ಘಟಕಗಳ ಪದಾಧಿಕಾರಿಗಳಾದ ಕೆ.ಪಿ. ರವೀಶ್, ಮಹಮ್ಮದ್ ಬೇಟು, ಲತಾ, ಸುಮತಿ, ಸಚಿನ್, ಶಿವಪ್ಪ ಸೇರಿದಂತೆ ಇತರರು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ, ಶೀಘ್ರ ಚೇತರಿಕೆಗೆ ಹಾರೈಸಿದರು.