Kodagu

ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

admincoorgdaily

ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
ವಿರಾಜಪೇಟೆ:ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆ ಹಾಗೂ ಪೊನ್ನಂಪೇಟೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ನವೀನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾನಂಡ ಪ್ರತ್ಯು, ಡಿಸಿಸಿ ಸದಸ್ಯ ವಿನಾಯ್ ಕುಮಾರ್, ಪಕ್ಷದ ವಕ್ತಾರ ಟಾಟು ಮೊಣಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಪಂಕಜ, ಯರವ ಸಮಾಜದ ಅಧ್ಯಕ್ಷ ಸಿದ್ದಪ್ಪ, ಲ್ಯಾಂಪ್ ಸೊಸೈಟಿ ಮಾಜಿ ಅಧ್ಯಕ್ಷ ಮಣಿ ಕುಜ್ಞ, ಪಕ್ಷದ ಮುಖಂಡರಾದ ವಿಲ್ಸನ್, ಬೆನ್ನಿ, ಅಫ್ರೋಜ್, ಸುಬ್ರು, ಸತೀಶ್, ಐಟಿಡಿಪಿ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಹಾಗೂ ಗಿರಿಜನ ಮುಖಂಡರು ಉಪಸ್ಥಿತರಿದ್ದರು.