Kodagu

ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ; ಇಂಚರ ಆನಂದ್ ರಾಜ್ಯಮಟ್ಟಕ್ಕೆ ಆಯ್ಕೆ

admincoorgdaily

ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ; ಇಂಚರ ಆನಂದ್ ರಾಜ್ಯಮಟ್ಟಕ್ಕೆ ಆಯ್ಕೆ
ಮಡಿಕೇರಿ,: ಮೈಸೂರು ಜಯಲಕ್ಷ್ಮಿ ಪುರಂನಲ್ಲಿರುವ ಮಹಾಜನ್ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 23ರಂದು ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಜಾನಪದ ನೃತ್ಯ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಂಚರ ಆನಂದ್, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಮತ್ತು  ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಸಂಯುಕ್ತ ಆಶ್ರಯದಲ್ಲಿ ನಡೆದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮೈಸೂರು ವಿಭಾಗದ ಏಳು ಜಿಲ್ಲೆಗಳು ಪಾಲ್ಗೊಂಡಿದ್ದವು. ಈ ಪೈಕಿ ದ್ವಿತೀಯ ಪಿಯುಸಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನದೊಂದಿಗೆ ಇಂಚರ, ಕೊಡಗಿನಿಂದ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 

ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ  ಈಕೆ, ಚಿತ್ತಾರ ವಾಹಿನಿಯ ಪ್ರಧಾನ ಸಂಪಾದಕ ಆನಂದ್ ಕೊಡಗು ಹಾಗೂ ಜಯಂತಿ ದಂಪತಿಯ ಪುತ್ರಿ. ಭರತ ನಾಟ್ಯದಲ್ಲಿ ಜ್ಯೂನಿಯರ್ ಪರೀಕ್ಷೆ ಉತ್ತೀರ್ಣಳಾಗಿರುವ ಇಂಚರ, ಅನೇಕ ಪ್ರಶಸ್ತಿಗಳನ್ನು ತನ್ನಾಗಿಸಿಕೊಂಡಿದ್ದಾಳೆ.
ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಡಿಸೆಂಬರ್ 5ರಂದು ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ನಡೆಯಲಿವೆ.