ಕಾಡಾನೆ ದಾಳಿಗೆ ತುತ್ತಾದ ಮಹಿಳೆಯ ಆರೋಗ್ಯ ವಿಚಾರಿಸಿದ ಡಾ ಮಂತರ್ ಗೌಡ

ನೆಲ್ಲಿಹುದಿಕೇರಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ವತ್ತೇಕರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಯತ್ನಿಸಿದ ಸಂದರ್ಭ ಬಿದ್ದು ಗಾಯಗೊಂಡ ಕಾರ್ಮಿಕ ಮಹಿಳೆ ಕವಿತಾ (40) ರವರ ಮನೆಗೆ ಶಾಸಕರ ಡಾ.ಮಂತರ್ ಗೌಡ ರವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ಗಾಯಗೊಂಡ ಕವಿತಾ ರವರಿಗೆ ಧೈರ್ಯ ತುಂಬಿದ ಶಾಸಕರು ವೈಯಕ್ತಿಕವಾಗಿ ಧನ ಸಹಾಯ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.