ನಾಳೆ ದುಬಾರೆ ಸಾಕಾನೆ ಶಿಬಿರ ಬಂದ್ - ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
admincoorgdaily

ಕುಶಾಲನಗರ: ಸೆ.23ರಂದು ಕೊಡಗು ವೃತ್ತ ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರದಲ್ಲಿ ನೇರ ನೇಮಕಾತಿ ಪ್ರಕ್ರಿಯೆ ಹಿನ್ನೆಲೆಯಲ್ಲಿ ನಾಳೆ ಸೆ.23 ರಂದು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಖಾಲಿ ಇರುವ ಆನೆ ಕಾವಾಡಿಗಳ ಹುದ್ದೆಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಮೇಲಧಿಕಾರಿಗಳ ನಿರ್ದೇಶನದಂತೆ ಒಂದು ದಿನ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.