ಇ-ಕೆವೈಸಿ ಗಡುವು ಅಕ್ಟೋಬರ್ 20ರವರೆಗೆ ವಿಸ್ತರಣೆ
admincoorgdaily

ಬೆಂಗಳೂರು, ಸೆ.17:ತಾಂತ್ರಿಕ ದೋಷ ಮತ್ತು ಸರ್ವರ್ ಮಂದಗತಿಯಿಂದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಜನರು ಪರದಾಡುತ್ತಿರುವ ವಿಚಾರ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳ ಮೂಲಕ ತಮ್ಮ ಗಮನಕ್ಕೆ ಬಂದಿದೆ. ಜನರ ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವುದು ತಮ್ಮ ಆದ್ಯ ಕರ್ತವ್ಯ ಎಂದು ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರು ತಿಳಿಸಿದ್ದಾರೆ.
ತಾಂತ್ರಿಕ ಕಾರಣಗಳಿಂದಾಗಿ ಯಾವುದೇ ಬಡ ಕುಟುಂಬವೂ ತನ್ನ ಹಕ್ಕಿನ ಆಹಾರಧಾನ್ಯದಿಂದ ವಂಚಿತರಾಗಬಾರದು ಎಂಬ ದೃಢ ನಿಲುವಿನೊಂದಿಗೆ ಇ-ಕೆವೈಸಿ ಅಂತಿಮ ಗಡುವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಲು ಆದೇಶಿಸಿದ್ದೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಖ್ಯೆ: ಆನಾಸ/ಸ/ 251/2026, ದಿನಾಂಕ: 17/09/2026)
ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.
ಸರ್ವರ್ ಸಮಸ್ಯೆಯನ್ನು ತಕ್ಷಣ ಬಗೆಹರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಫಲಾನುಭವಿಗಳು ಯಾವುದೇ ಗೊಂದಲವಿಲ್ಲದೆ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಪೂರ್ಣಗೊಳಿಸಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ. ಜನಸಾಮಾನ್ಯರ ಹಿತರಕ್ಷಣೆ ನಮ್ಮ ಇಲಾಖೆ ಸದಾ ಕಾರ್ಯಪ್ರವೃತ್ತವಾಗಿದೆ ಎಂದು ಅವರು ಹೇಳಿದ್ದಾರೆ.