ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಎಡಿಕೇರಿ ಪ್ರಸನ್ನ ಅವರಿಂದ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
admincoorgdaily

ಕುಶಾಲನಗರ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಕುಶಾಲನಗರ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಬಿಜೆಪಿ ಮುಖಂಡರು ಹಾಗೂ ಸಮಾಜ ಸೇವಕರಾದ ನಾಪೋಕ್ಲು ಸಮೀಪದ ಎಡಿಕೇರಿ ಪ್ರಸನ್ನ ಅವರು 30ಕ್ಕೂ ಹೆಚ್ಚು ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ, ರೋಗಿಗಳ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಜರಂಗದಳ ಸಂಯೋಜಕ ಕಂಬಿ ಬಾಣೆ ಪ್ರವೀಣ್, ವಿ.ಎಚ್.ಪಿ.ಯ ಸಂತೋಷ್, ಪ್ರಕಾಶ್, ಕುಮಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.