ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್ ಬಸ್ ಬೆಂಕಿಗೆ ಆಹುತಿ
admincoorgdaily

ಮೈಸೂರು:
ಇಂದು ಮಧ್ಯಾಹ್ನ 3.20 ಗಂಟೆಗೆ ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ KSRTC ಬಸ್ಸಿನಲ್ಲಿ ಬಿಳಿಕೆರೆ ಸಮೀಪ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಬಸ್ ಚಲಿಸುತ್ತಿದ್ದ ಸಂದರ್ಭ ಹೊಗೆಯ ವಾಸನೆ ಹರಡುತ್ತಿರುವುದನ್ನು ಗಮನಿಸಿದ ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿ ಅದರಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.