ವಿರಾಜಪೇಟೆ ಗೌರಿ-ಗಣೇಶ ವಿಸರ್ಜನೆ ವೇಳೆ ನಡೆದಿದ್ದ ವಿದ್ಯುತ್ ದುರಂತ: ಗಾಯಗೊಂಡಿದ್ದ ಯುವಕ ಸಾವು
admincoorgdaily

ವಿರಾಜಪೇಟೆ: ಐತಿಹಾಸಿಕ ಗೌರಿ-ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ವಿದ್ಯುತ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಹುಬ್ಬಳ್ಳಿ ಮೂಲದ ಬಸವರಾಜ (22) ಮೃತ ಯುವಕ. ಈತ ಡಿಜೆ ಲೈಟಿಂಗ್ ವಾಹನದ ಮೇಲೆ ನಿಂತು ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಶೇ. 40ರಷ್ಟು ಸುಟ್ಟ ಗಾಯಗಳಾಗಿದ್ದವು.
ತಕ್ಷಣ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅಪೋಲೋ ಆಸ್ಪತ್ರೆ ಮತ್ತು ಬಳಿಕ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಬಸವರಾಜ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಸಂಬಂಧ ವಿರಾಜಪೇಟೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.