Kodagu

ಹುದಿಕೇರಿಗೆ ವಿದ್ಯುತ್ ಶಕ್ತಿ;ಉಪಕೇಂದ್ರ ಕಾಮಗಾರಿ ವೀಕ್ಷಿಸಿದ ಶಾಸಕ ಪೊನ್ನಣ್ಣ!

admincoorgdaily

ಹುದಿಕೇರಿಗೆ ವಿದ್ಯುತ್ ಶಕ್ತಿ;ಉಪಕೇಂದ್ರ ಕಾಮಗಾರಿ ವೀಕ್ಷಿಸಿದ ಶಾಸಕ ಪೊನ್ನಣ್ಣ!
1002813592.jpg


ಪೊನ್ನಂಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಭಾಗಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅಧಿಕೃತ ಪ್ರವಾಸ ಕೈಗೊಂಡರು.

ಈ ಸಂದರ್ಭದಲ್ಲಿ, ತಮ್ಮ ವಿಶೇಷ ಪ್ರಯತ್ನದ ಫಲವಾಗಿ ಹುದಿಕೇರಿ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ 66/11 ಕೆ.ವಿ. ವಿದ್ಯುತ್ ಉಪಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು, ಕಾಮಗಾರಿಯ ಪ್ರಗತಿಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ನಂತರ ಸ್ಥಳದಲ್ಲಿದ್ದ ಚೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ಈ ವಿದ್ಯುತ್ ಉಪಕೇಂದ್ರವು ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಲಭ್ಯವಾಗುವಂತೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಡಿಸಿಸಿ ಸದಸ್ಯರಾದ ಚೊಟ್ಟೆಯಂಡಮಾಡ ವಿಶು, ವಲಯ ಅಧ್ಯಕ್ಷರಾದ ಚಂಗುಲಂಡ ಸೂರಜ್, ಬೂತ್ ಅಧ್ಯಕ್ಷರಾದ ಮಂದಣ್ಣ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷರಾದ ಅಣ್ಣಳ್ಳಮಾಡ ಅಪ್ಪಣ್ಣ, ಟಿ. ಶೆಟ್ಟಿಗೇರಿ ವಲಯ ಅಧ್ಯಕ್ಷರಾದ ತಿತೀರ ಪ್ರಭು, ಹಿರಿಯ ಕಾಂಗ್ರೆಸ್ ಮುಖಂಡರಾದ ಚೆಕ್ಕೇರ ವಾಸು ಕುಟ್ಟಪ್ಪ ಹಾಗೂ ಸುಧೀರ್, ಪಕ್ಷದ ಮುಖಂಡರಾದ ಅಜ್ಜಿಕುಟ್ಟಿರ ಪಮ್ಮು, ನೂರೇರ ರಮೇಶ್, ಮನೋಹರ್, ಕಿಟ್ಟು, ಕಾವೇರಪ್ಪ, ಲೋಕನಾಥ್, ರಬಿ, ಬಿಪಿನ್ ಹಾಗೂ ಹುದಿಕೇರಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ರೀಕ್ಷಿತ್ ಕಾರ್ಯಪ್ಪ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.