Kodagu

ಹಾರಂಗಿ ಟ್ರೀ ಪಾರ್ಕ್ ಮತ್ತು ಸಾಕಾನೆ ಶಿಬಿರಗಳಲ್ಲಿ ಸುರಕ್ಷತಾ ಕ್ರಮಗಳೊಂದಿಗೆ 'ಆನೆಗಳ ಪ್ರದರ್ಶನ' ಪುನರಾರಂಭ

admincoorgdaily

ಹಾರಂಗಿ ಟ್ರೀ ಪಾರ್ಕ್ ಮತ್ತು ಸಾಕಾನೆ ಶಿಬಿರಗಳಲ್ಲಿ ಸುರಕ್ಷತಾ ಕ್ರಮಗಳೊಂದಿಗೆ 'ಆನೆಗಳ ಪ್ರದರ್ಶನ' ಪುನರಾರಂಭ
ಕುಶಾಲನಗರ, ಸೆ.3 : ಹಾರಂಗಿ ಟ್ರೀ ಪಾರ್ಕ್ ಮತ್ತು ಸಾಕಾನೆ ಶಿಬಿರಗಳಲ್ಲಿ ಸಾರ್ವಜನಿಕರಿಗಾಗಿ ಆನೆಗಳ ಪ್ರದರ್ಶನವನ್ನು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಪುನರಾರಂಭಿಸಲಾಗುತ್ತಿದೆ.

, ಆನೆಗಳ ಪ್ರದರ್ಶನದ ಸಂದರ್ಭದಲ್ಲಿ ಪ್ರವಾಸಿಗರು ಮತ್ತು ಸಾರ್ವಜನಿಕರು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಆನೆಗಳ ಸ್ವಭಾವ ಮತ್ತು ಚಲನವಲನಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರದರ್ಶನ ವೀಕ್ಷಿಸಲು ಆಗಮಿಸುವ ಸಾರ್ವಜನಿಕರು ಅರಣ್ಯ ಇಲಾಖೆ ಹಾಗೂ ಸಾಕಾನೆ ಶಿಬಿರದ ಸಿಬ್ಬಂದಿ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ. ಆನೆಗಳ ಸಮೀಪ ತೆರಳುವುದು,ಕಿರಿ ಚುವುದು,  ಮುಟ್ಟುವುದು, ಆಹಾರ ನೀಡುವುದು ಅಥವಾ ಯಾವುದೇ ರೀತಿಯ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.


ಪ್ರದರ್ಶನ ವೀಕ್ಷಿಸಲು ಆಗಮಿಸುವ ಸಾರ್ವಜನಿಕರು ಅರಣ್ಯ ಇಲಾಖೆ ಹಾಗೂ ಸಾಕಾನೆ ಶಿಬಿರದ ಸಿಬ್ಬಂದಿ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ. 

ಆನೆಗಳ ಸುರಕ್ಷತೆ, ಕಲ್ಯಾಣ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ, ಸಾರ್ವಜನಿಕರಲ್ಲಿ ಆನೆಗಳ ಸಂರಕ್ಷಣೆ ಮತ್ತು ಅವುಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾರಂಗಿ ಆನೆ ಶಿಬಿರದಲ್ಲಿ ಪ್ರದರ್ಶನವನ್ನು ಪುನರಾರಂಭಿಸಲಾಗುತ್ತಿದೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.