ಸೆ.06 ರಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್ ಕೊಡಗು ಜಿಲ್ಲಾ ಪ್ರವಾಸ
admincoorgdaily

ಮಡಿಕೇರಿ :-ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ.ಜಾರ್ಜ್ ಅವರು ಸೆಪ್ಟೆಂಬರ್, 06 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಸೆಪ್ಟೆಂಬರ್, 06 ರಂದು ಬೆಳಗ್ಗೆ 6 ಗಂಟೆಗೆ ಗೋಣಿಕೊಪ್ಪದಲ್ಲಿ ನಡೆಯುವ ಕೊಡಗು ಮಾನ್ಸೂನ್ ಹಾಫ್ ಮ್ಯಾರಥಾನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ ಡಿ.ಎಂ. ಅವರು ತಿಳಿಸಿದ್ದಾರೆ.