ಗರಂಗದೂರು ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ

ಸುಂಟಿಕೊಪ್ಪ; ಸಮೀಪದ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಂಗದೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಪ್ರಾರಂಭಿಸುವ ಕಾರ್ಯಕ್ರಮ ನಡೆಯಿತು.
ಆಂಗ್ಲ ಮಾಧ್ಯಮವನ್ನು ಹರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೋಜಮ್ಮ ಹಾಗೂ ಉಪಾಧ್ಯಕ್ಷ ಮುಸ್ತಫಾ ಅವರು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುಸ್ತಫಾ,ರಾಜ್ಯ ಸರ್ಕಾರವು ಇದೀಗ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಆರಂಭಿಸಿರುವುದು ಶ್ಲಾಘನೀಯ ವಿಷಯವಾಗಿದೆ.ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೂ ಕೂಡ ಇಂಗ್ಲಿಷ್ ಭಾಷೆಯಲ್ಲಿ ಶಿಕ್ಷಣ ಸಿಗಲಿದೆ.ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಲಿದೆ ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು,ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು,ಹಾಗೂ ಶಿಕ್ಷಕ ವೃಂದದವರು ಇದ್ದರು.