Kodagu

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಬೇತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

admincoorgdaily

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಬೇತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ
ವರದಿ :ಝಕರಿಯ ನಾಪೋಕ್ಲು 

ನಾಪೋಕ್ಲು :ಶಿಕ್ಷಕರ ದಿನಾಚರಣೆ ಪ್ರಯುಕ್ತ ನಾಪೋಕ್ಲು ಬೇತು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

 ಬೇತು ಗ್ರಾಮದ ದಾನಿಗಳಾದ ಅಪ್ಪನೆರವಂಡ ವಿನು ಮಾದಪ್ಪ ಅವರು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಬರೆಯುವ ಸ್ಪರ್ಧೆಯನ್ನು ನಡೆಸಿ ಸ್ಪರ್ಧೆಯಲ್ಲಿ ಪ್ರಥಮ,ದ್ವಿತೀಯ ಹಾಗೂ ಐದು ಸಮಾಧಾನಕರ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.

ಈ ಸಂದರ್ಭ ದಾನಿಗಳಾದ ಅಪ್ಪನೆರವಂಡ ವಿನು ಮಾದಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಮಮತ ಬಿ.ಪಿ. ಸಹ ಶಿಕ್ಷಕಿ ಸಾವಿತ್ರಿ ಬಿ.ಬಿ. ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.