ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ
admincoorgdaily

ಮಡಿಕೇರಿ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೈಬುಲಿರ ಪಾರ್ವತಿ ಬೋಪಯ್ಯ ರವರು ಸ್ಥಾಪಿಸಿರುವ ದಿ.ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ದತ್ತಿನಿಧಿ ಕಾರ್ಯಕ್ರಮದಂತೆ ಕೊಡಗು ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮತ್ತು ಕನ್ನಡ ನಾಡು, ನುಡಿ, ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಜಿಲ್ಲೆಯ ಶಾಲೆ ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
• ಕೊಡಗು ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
* ಒಂದು ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದು. ಈ ಕೆಳಗೆ ಸೂಚಿಸಿರುವ 4 ವಿಚಾರದಲ್ಲಿ ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ಎರಡು ಪುಟ ಮೀರದಂತೆ ಪ್ರಬಂಧವನ್ನು ಸ್ವಹಸ್ತದಿಂದ ಬರೆದು ಈ ಕೆಳಗಿನ ವಿಳಾಸಕ್ಕೆ ದಿನಾಂಕ 15.09.2026ರ ಒಳಗಾಗಿ ತಲುಪುವಂತೆ ಅಂಚೆ/ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳುಹಿಸಿಕೊಡತಕ್ಕದ್ದು.
೧. ಕನ್ನಡ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ
೨. ಸಾಹಿತ್ಯ ಮತ್ತು ಸಮಾಜ
೩. ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ
೪. ಕೊಡಗಿನಲ್ಲಿ ಕನ್ನಡವನ್ನು ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ
ಪ್ರಬಂದ ಕಳುಹಿಸಬೇಕಾದ ವಿಳಾಸ
ಅಧ್ಯಕ್ಷರು,
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಂಬೇಡ್ಕರ್ ಭವನದ ಬಳಿ,
ಸುದರ್ಶನ್ ವೃತ್ತ,
ಮಡಿಕೇರಿ - 571201
ಮೊಬೈಲ್ ಸಂಖ್ಯೆ : 9113892396
ಇಮೇಲ್ ಅಡ್ರೆಸ್
kamathkeshava33@gmail.com
ವಿಜೇತ ಪ್ರಬಂಧಕ್ಕೆ ಪ್ರಥಮ ದ್ವಿತೀಯ ತೃತೀಯ ಮೂರು ಬಹುಮಾನಗಳನ್ನು ಮತ್ತು ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್ ಐ ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.