Kodagu

ಸಿ&ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ

admincoorgdaily

ಸಿ&ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ
ಸೋಮವಾರಪೇಟೆ:- ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆಯನ್ನು ತಕ್ಷಣವೇ ಪರಿಹರಿಸದಿದ್ದರೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ರೈತ ಹೋರಾಟ ಸಮಿತಿ ಎಚ್ಚರಿಸಿದೆ.
 ಪಟ್ಟಣದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿಸುರೇಶ್ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಸಮಸ್ಯೆ ಅರಿಯಲು ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿ ಆರು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿತ್ತು ಆದರೆ ಒಂದು ವರ್ಷವಾದರೂ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ ವೆಂದು ಆರೋಪಿಸಿದರು.

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಕೇಂದ್ರಸರ್ಕಾರಕ್ಕೆ ವರದಿ ನೀಡಬೇಕು ಆದರೆ ನಮ್ಮ ಜನಪ್ರತಿನಿಧಿಗಳು ಹಾಗೂ ಸರ್ಕಾರ ಈ ವಿಷಯದ ಬಗ್ಗೆ ಗಂಬೀರವಾಗಿ ಯೋಚಿಸಿದಂತೆ ಕಾಣುತ್ತಿಲ್ಲವೆಂದ ಅವರು ಇದು ಜಿಲ್ಲೆಯ ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಆದ್ದರಿಂದ ಸರ್ಕಾರ ತಕ್ಷಣವೇ ಸಮಸ್ಯೆ ಪರಿಹರಿಸಲು ಮುಂದಾಗದಿದ್ದರೆ ಮುಂದೆ ನಡೆಯುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಬಹಿಷ್ಕರಿಸುತೇವೆ ಎಂದು ಎಚ್ಚರಿಸಿದರು.

ಸರ್ವೋಚ್ಚ ನ್ಯಾಯಾಲಯದಲ್ಲಿ  ಕಾನೂನು ಹೋರಾಟ ನಡೆಸಲೂ ರಾಜ್ಯ ಸರ್ಕಾರದ ವರದಿ ಬೇಕಾಗಿರುವುದರಿಂದ ಡಿಸೆಂಬರ್ ಒಂದರೊಳಗೆ ಸಮಿತಿಯ ವರದಿ ಪಡೆದು ಎರಡನೇ ತಾರೀಕಿನಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಷಯ ಚರ್ಚಿಸಬೇಕು ಇಲ್ಲವಾದಲ್ಲಿ ಅಧಿವೇಶನದ ನಂತರ ಅಹೋರಾತ್ರಿ ಧರಣಿ ನಡೆಸುವುದರೊಂದಿಗೆ ಚುನಾವಣೆಯನ್ನು ಬಹಿಷ್ಕರಿಸಲಾಗುವುದು ಸುರೇಶ್ ತಿಳಿಸಿದರು.
ಪತ್ರಿಕಾ ಗೋಷ್ಠಿ ಯಲ್ಲಿ ರೈತ ಹೋರಾಟ ಸಮಿತಿಯ ಪ್ರಮುಖರುಗಳಾದ ಮಿಥುನ್,ಸಂಪತ್,ಮಧು ಹಾಗೂ ನಾಗರಾಜ್ ಉಪಸ್ತಿತರಿದ್ದರು.