ಏಳನೇ ಹೊಸಕೋಟೆಯಲ್ಲಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ - ಇಬ್ಬರು ದುರ್ಮರಣ
admincoorgdaily

ಸುಂಟಿಕೊಪ್ಪ: ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆ - ಮಾರುತಿ ನಗರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಹಿರಿಯೂರಿನಿಂದ ಮಡಿಕೇರಿ ದಸರಾ ಕಾರ್ಯಕ್ರಮ ವೀಕ್ಷಿಸಲು ಬಂದು ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು, ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ತಲೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ಯುವಕರ ಹಾಗೂ ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಬೇಕಿದ್ದು, ಮಳೆಯಿಂದಾಗಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.