ವಿರಾಜಪೇಟೆ ಗಣಪತಿ ವಿಸರ್ಜನೆ ವೇಳೆ ಅಗ್ನಿ ಅವಘಡ; ಬಸವರಾಜು ಸ್ಥಿತಿ ಗಂಭೀರ
admincoorgdaily

ವಿರಾಜಪೇಟೆ: ವಿರಾಜಪೇಟೆಯಲ್ಲಿ ಶುಕ್ರವಾರ ನಡೆದ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಬಸವರಾಜು ಎಂಬ ಯುವಕನಿಗೆ ಶೇ.70 ರಷ್ಟು ಸುಟ್ಟಗಾಯಗಳಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಮೆರವಣಿಗೆ ವೇಳೆ ಮಂಟಪಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಬಸವರಾಜು ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಬಸವರಾಜು ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.