Kodagu

ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿಗೆ ಮೌಲ್ಯಮಾಪನ ಕುಲಸಚಿವರ ಮೊದಲ ಭೇಟಿ

admincoorgdaily

ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿಗೆ ಮೌಲ್ಯಮಾಪನ ಕುಲಸಚಿವರ ಮೊದಲ ಭೇಟಿ
ಮಡಿಕೇರಿ: ಕೊಡಗು ವಿಶ್ವವಿದ್ಯಾಲಯದ ನೂತನ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಭಾರತಿ ಹಿರೇಮಠ ಅವರು ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ಮಹಾವಿದ್ಯಾಲಯವಾದ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ಮೊಟ್ಟಮೊದಲ ಬಾರಿಗೆ ಭೇಟಿ ನೀಡಿ, ಸಂಶೋಧನೆ ಮತ್ತು ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪರೀಕ್ಷಾ ಮೂಲಸೌಕರ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. 

ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಮೇಜರ್ ರಾಘವ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯೊಂದಿಗೆ ಅರ್ಥಪೂರ್ಣ ಸಂವಾದವನ್ನು ನಡೆಸಿದರು.