ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ ಕಲಾ ಜಾಥಾ - ವಸ್ತು ಪ್ರದರ್ಶನ ಆಕರ್ಷಣೆ
admincoorgdaily

ಮಡಿಕೇರಿ: ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಸಹಯೋಗದಲ್ಲಿ ಕೊಡಗು ಜಾನಪದ ಪರಿಷತ್ ವತಿಯಿಂದ ನಡೆಯುವ 6ನೇ ವರ್ಷದ ಜಾನಪದ ದಸರಾ ತಾ. 18 ರಂದು (ಇಂದು) ಆಯೋಜಿಸಲಾಗಿದೆ ಎಂದು ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಹಾಗೂ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ.
ಬೆಳಿಗ್ಗೆ 9.30 ಗಂಟೆಗೆ ನಗರದ ಖಾಸಗಿ ಬಸ್ ನಿಲ್ದಾಣದಿಂದ ಕಲಾ ಜಾಥಾ ಹೊರಡಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ ನೀಡಲಿದ್ದಾರೆ. ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ, ಕರಡಿ ಮಜಲು, ರಂಗ ಕುಣಿತ, ಜಾನಪದ ಜಾಗೃತಿ ನಾಟಕ, ಆದಿವಾಸಿ ನೃತ್ಯ ಪ್ರದರ್ಶನ ಕಲಾ ಜಾಥಾದ ಆಕರ್ಷಣೆಯಾಗಲಿದೆ.
ಬೆಳಿಗ್ಗೆ 10 ಗಂಟೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಕೊಡಗು ಜಾನಪದ ಅಧ್ಯಕ್ಷ ಬಿ.ಜಿ. ಅನಂತಶಯನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ.
ಜಾನಪದ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷ ಪಿ. ಕಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉದ್ಯಮಿಗಳಾದ ಅವರೆಮಾದಂಡ ಶರಣ್ ಪೂಣಚ್ಚ, ನಾಪಂಡ ಮುತ್ತಪ್ಪ, ಪೊನ್ನಚ್ಚನ ಮೋಹನ್, ಕುಕ್ಕೇರ ಜಯ ಚಿಣ್ಣಪ್ಪ, ಜಯಂತಿ ಶೆಟ್ಟಿ, ಸಮಾಜ ಸೇವಕ ಎಡಿಕೇರಿ ಪ್ರಸನ್ನ, ಜಿಲ್ಲಾಡಳಿತದ ಕಾನೂನು ಸಲಹೆಗಾರ ಲೋಕೇಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಚಿನ್ನಸ್ವಾಮಿ, ಜಾನಪದ ಗಾಯಕರುಗಳಾದ ಉಮೇಶ್, ರಿಕ್ಕಿ ಮುತ್ತಪ್ಪ, ಮಡಿಕೇರಿ ನಗರ ದಸರಾ ಸಮಿತಿ ಉಪಾಧ್ಯಕ್ಷ ಮಹೇಶ್ ಜೈನಿ, ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬಿತಾ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.