Kodagu

ವಿ. ಬಾಡಗ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆಯಿಂದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ

admincoorgdaily

ವಿ. ಬಾಡಗ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆಯಿಂದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ
ವಿರಾಜಪೇಟೆ: ಅರಣ್ಯ ಇಲಾಖೆ ವತಿಯಿಂದ ವಿರಾಜಪೇಟೆಯ ವಿ ಬಾಡಗ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.

 ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಕಾಡಿನ ರಕ್ಷಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸದುದ್ದೇಶದಿಂದ ಈ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ತಮ್ಮ ಸುಂದರ ವರ್ಣಚಿತ್ರಗಳ ಮೂಲಕ ಪ್ರಕೃತಿ ಪ್ರೇಮವನ್ನು ಬಿಂಬಿಸಿದ್ದರು.

  ವಿಶೇಷ ಸಮಾರಂಭದಲ್ಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಬಹುಮಾನಗಳನ್ನು ವಿತರಿಸಿ ಗೌರವಿಸಿದರು. 

ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ, ಶಾಲಾ ಬ್ಯಾಗ್ ಹಾಗೂ ನೀರಿನ ಬಾಟಲ್‌ಗಳನ್ನು ಬಹುಮಾನವಾಗಿ ನೀಡಲಾಯಿತು.

  ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯೋಪದ್ಯಾಯರಾದ ಕೆ.ಸಿ. ಗೀತಾಂಜಲಿ ಅವರು ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ ಬೆಳೆಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು. 
ಈ ಸಂದರ್ಭ ಶಿಕ್ಷಕ ವೃಂದ ಹಾಗೂ ಅರಣ್ಯ ಇಲಾಖೆಯ ಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದು ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.