ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಜಿ.ಪಂ.ಮಾಜಿ ಸದಸ್ಯ ಬಾನಂಡ ಪ್ರಥ್ಯು ಆಯ್ಕೆ
admincoorgdaily

ಭಾಗಮಂಡಲ;
ಇಂದು ಭಾಗಮಂಡಲದ ದೇವಾಲಯದ ಆವರಣದಲ್ಲಿ ನಡೆದ ದೇವಾಲಯ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ವ್ಯವಸ್ಥಾಪನ ಸಮಿತಿಯ ಎಂಟು ಜನರ ಸಭೆಯಲ್ಲಿ ಗೋಣಿಕೊಪ್ಪಲ್ಲಿನ ಚೋಡುಮಡ ರಾಜ ಅಯ್ಯಣ್ಣ ನವರು ಬಾನಂಡ ಪ್ರಥ್ಯುರವರ ಹೆಸರನ್ನು ಸೂಚಿಸಿದಾಗ, ಇತರ ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಅನುಮೋದಿಸಿದರು.
ಈ ಸಂದರ್ಭ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಧೇಖರ್ ಅವರು ನೂತನ ಅಧ್ಯಕ್ಷ ಬಾನಂಡ ಪ್ರಥ್ಯು ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅಧ್ಯಕ್ಷರು, ತಲಕಾವೇರಿ ಭಾಗಮಂಡಲ ದೇವಾಲಯದ ಪಾವಿತ್ರತೆಯನ್ನು ಕಾಪಾಡಿಕೊಂಡು ನಾಡಿನ ಜನತೆಯ ಸಹಕಾರದಲ್ಲಿ, ದೇವಾಲಯದ ಅಭಿವೃದ್ಧಿಯೊಂದಿಗೆ ಧಾರ್ಮಿಕ ಶ್ರದ್ಧಾ ಕೇಂದ್ರವಾದ ತಲಾಕಾವೇರಿ ಪವಿತ್ರ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಎಲ್ಲ ಸಮಿತಿ ಸದಸ್ಯರು ಕೈಜೋಡಿಸುವಂತೆ ಮನವಿ ಮಾಡಿಕೊಂಡುರು.
ಈ ಬಾರಿಯ ತೀರ್ಥೋತ್ಸವ ಸಂದರ್ಭದಲ್ಲಿ ಭಕ್ತಾದಿಗಳಿಗೆ ಯಾವುದೇ ಕೊಂದು ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದ್ದು , ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಜಿಲ್ಲಾಡಳಿತದ ಸಹಕಾರದಲ್ಲಿ ಈಗಾಗಲೇ ಇಲ್ಲಿಗೆ ಬರುವ ಭಕ್ತಾದಿಗಳಿಗೆ,ಎಲ್ಲಾ ವ್ಯವಸ್ಥೆಯನ್ನು ಸಜ್ಜುಗೊಳಿಸಲಾಗಿದೆ ಎಂದರು.