ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರಿಗೆ ಆಹ್ವಾನ

ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ  ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರಿಗೆ  ಆಹ್ವಾನ

ಸೋಮವಾರಪೇಟೆ:- ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ರಾಷ್ಟ್ರದ ಮಾಜಿ ಪ್ರದಾನ ಮಂತ್ರಿ ಹೆಚ್.ಡಿ. ದೇವೇಗೌಡರನ್ನು ಆಹ್ವಾನಿಸಲಾಯಿತು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ ಮಠಧೀಷರ ನೇತೃತ್ವದಲ್ಲಿ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ತೆರಳಿ ದೇವೇಗೌಡರನ್ನು ಭೇಟಿಮಾಡಿದ ತಂಡ ವೀರಭದ್ರೇಶ್ವರ ಜಯಂತಿಯ ಮಹತ್ವ ಹಾಗೂ ಆಚರಣೆಯಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಈ ಸಂದರ್ಭ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿಗಳು ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದರು. ಭಾದ್ರಪದ ಮಾಸದ ಮೊದಲ ಮಂಗಳವಾರ ವೀರಭದ್ರ ಸ್ವಾಮಿ ಅವತರಿಸಿದರೆಂಬ ಪ್ರತೀತಿ ಇದ್ದು ಅಂದು ಭಾರತ ಸೇರಿದಂತೆ ವಿಶ್ವದ ಹಲವೆಡೆ ವರ್ಧಂತಿ ಮಹೋತ್ಸವ ನಡೆಯಲಿದೆ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಕಳೆದ 6 ವರ್ಷಗಳಿಂದ ಗ್ರಾಮ,ರಾಜ್ಯ,ರಾಷ್ಟ್ರಮಟ್ಟದಲ್ಲಿ ಆಚರಿಸಿಕೊಂಡು ಬರುತ್ತಿದ್ದು,ಪ್ರತಿವರ್ಷ ಒಬ್ಬರಿಗೆ ವೀರಭದ್ರೇಶ್ವರ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕನವಾಡಿ ತಿಳಿಸಿದರು.ಈ ಭಾರಿಯಿಂದ ರಾಜ್ಯ ಮಟ್ಟದಲ್ಲಿಯೂ ಪ್ರಶಸ್ತಿ ನೀಡಲಾಗುವುದು ಎಂದರು.

 ಈ ಸಂದರ್ಭ ಸಂಘಟನಾ ವೇದಿಕೆಯ ವೀರಭದ್ರೇಶ್ವರ ವರ್ಧಂತಿ ಮಹೋತ್ಸವದ ರಾಷ್ಟ್ರೀಯ ಉಪಾಧ್ಯಕ್ಷರಾದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ.ಸದಾಶಿವ ಸ್ವಾಮೀಜಿ,ರಾಜ್ಯ ಉಪಾಧ್ಯಕ್ಷರಾದ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ,ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್, ಜೆಡಿಎಸ್ ನ ವಕ್ತಾರ ಮಹೇಶ್ ಗೌಡ, ಸಂಘಟನೆಯ ಅರ್ಚಕ ಪುರೋಹಿತ ಘಟಕದ ರಾಷ್ಟ್ರೀಯ ಅಧ್ಯಕ್ಷ ಚಂದ್ರಶೇಖರ ಕೋಡಿಕೊಪ್ಪಲು,ಮಹಿಳಾ ಘಟಕದ ಉಪಾಧ್ಯಕ್ಷೆ ದಿವ್ಯಾ ಹಾಗರಗಿ,ಪ್ರಮುಖರಾದ ಮಂಜುನಾಥ್,ಹರೀಶ್,ಪುನೀತ್,ಸೂರ್ಯ ಹಾಗೂ ಮುಂತಾದವರು ಹಾಜರಿದ್ದರು.