ಮಾಲ್ದಾರೆಯಲ್ಲಿ ನಾಳೆ ಉಚಿತ ಆರೋಗ್ಯ ತಪಾಸಣೆ ಶಿಬಿರ; ವಿವಿಧ ಕಾಯಿಲೆಗಳ ತಪಾಸಣೆ, ವೈದ್ಯರಿಂದ ಸೂಕ್ತ ಸಲಹೆ
admincoorgdaily

ಸಿದ್ದಾಪುರ :-
ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದಲ್ಲಿ ಅ.12ರ ಸೋಮವಾರ ಉಚಿತ ಆರೋಗ್ಯ ತಪಾಸಣೆ ಮತ್ತು ಸಲಹಾ ಶಿಬಿರವನ್ನು ಆಯೋಜಿಸಲಾಗಿದೆ.
ಮೈಸೂರಿನ ಜಿ.ಸಿ.ಎಸ್. ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಜನಪರ ಸಂಘಟನೆ ಹಾಗೂ ಓಡಿಪಿ ಮಹಿಳಾ ಒಕ್ಕೂಟದ ಸಹಯೋಗದಲ್ಲಿ ಮಾಲ್ದಾರೆ ಮುತ್ತಪ್ಪ ದೇವಸ್ಥಾನದ ಸಮುದಾಯ ಭವನದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ (ಮಧುಮೇಹ ಸೇರಿದಂತೆ), ಮೂಳೆ ಮತ್ತು ಕೀಲು ಚಿಕಿತ್ಸೆ ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗಗಳ ನುರಿತ ವೈದ್ಯರು ಭಾಗವಹಿಸಿ, ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆ ನೀಡಲಿದ್ದಾರೆ.
ಗ್ರಾಮದ ಸುತ್ತಮುತ್ತಲಿನ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.