Kodagu

ಚೆಯ್ಯಂಡಾಣೆಯಲ್ಲಿ ನ.17ರಂದು ಉಚಿತ ರೇಬಿಸ್ ಲಸಿಕಾ ಶಿಬಿರ

admincoorgdaily

ಚೆಯ್ಯಂಡಾಣೆಯಲ್ಲಿ ನ.17ರಂದು ಉಚಿತ ರೇಬಿಸ್ ಲಸಿಕಾ ಶಿಬಿರ
ನಾಪೋಕ್ಲು :ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರ ಸಾಕು ನಾಯಿಗಳು ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ನವೆಂಬರ್ 17ರಂದು ಚೆಯ್ಯಂಡಾಣೆ ಪಶು ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಮೂರು ತಿಂಗಳ ಮೇಲ್ಪಟ್ಟ ನಾಯಿ ಮತ್ತು ಬೆಕ್ಕುಗಳಿಗೆ ಲಸಿಕೆ ಹಾಕಲಾಗುವುದು.
ಆದ್ದರಿಂದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ತಮ್ಮ ಸಾಕು ಪ್ರಾಣಿಗಳನ್ನು ಕರೆತಂದು ಉಚಿತ ರೇಬಿಸ್ ಲಸಿಕೆ ಹಾಕಿಸಿಕೊಳ್ಳುವಂತೆ ಮೂರ್ನಾಡು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ. ಶಿಲ್ಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.