Kodagu

ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ

admincoorgdaily

ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ
ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯಿತಿ, ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ ಮತ್ತು ಮಡಿಕೇರಿ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ರೇಬಿಸ್ ಲಸಿಕಾ ಶಿಬಿರವು ತಾಳತ್ತಮನೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆಯ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಾಶ್ರಯದಲ್ಲಿ ಇಂದು ತಾಳತ್ತಮನೆಯ ಆಟದ ಮೈದಾನದಲ್ಲಿ ಶಿಬಿರ ನಡೆಯಿತು. 
ಮಡಿಕೇರಿ ಪಶು ವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಚೇತನ್ ಸಿ.ಪಿ., ಡಾ.ಶಿಲ್ಪಾ ಶ್ರೀ ಸಿ.ಎಸ್., ಡಾ.ಚೆಟ್ಟಿಚ್ಚ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ಶಿಬಿರವನ್ನು ನಡೆಸಲಾಯಿತು. 

ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಶಿಬಿರದಲ್ಲಿ ತಾಳತ್ತಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅನೇಕ ಪಶುಪ್ರೇಮಿಗಳು ತಮ್ಮ ಸಾಕುಪ್ರಾಣಿಗಳೊಂದಿಗೆ ಭಾಗವಹಿಸಿ ಉಚಿತ ಲಸಿಕಾ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡರು. ಒಟ್ಟು 99 ಶ್ವಾನಗಳು ಹಾಗೂ 11 ಬೆಕ್ಕುಗಳಿಗೆ ರೇಬಿಸ್ ಲಸಿಕೆ ನೀಡಲಾಯಿತು.