Kodagu

ಅ.31 ರಂದು ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ

admincoorgdaily

ಅ.31 ರಂದು ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ
ಮಡಿಕೇರಿ:-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದೊಂದಿಗೆ ಅಕ್ಟೋಬರ್, 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಹಾಗೂ ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. 

      ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್‍ದಾಸ್, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಕೆ.ಸಿ.ದಯಾನಂದ ಕೂಡಕಂಡಿ, 
      ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ವೈ.ರಾಜೇಶ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೇಶವ ಕಾಮತ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ, ಮಂಗಳೂರು ಸಮರವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನೆ ಸಮಿತಿ ಅಧ್ಯಕ್ಷರು ಹಾಗೂ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಪಿ.ಸಿ.ಜಯರಾಮ್, ಲಕ್ಷ್ಮೀನಾರಾಯಣ ಕಜೆಗದ್ದೆ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರು ಇತರರು ಪಾಲ್ಗೊಳ್ಳಲಿದ್ದಾರೆ.