Kodagu

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಸೆ.28ಕ್ಕೆ ಮಡಿಕೇರಿಯಲ್ಲಿ ನೇರ ಸಂದರ್ಶನ

admincoorgdaily

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಸೆ.28ಕ್ಕೆ ಮಡಿಕೇರಿಯಲ್ಲಿ ನೇರ ಸಂದರ್ಶನ

    ಮಡಿಕೇರಿ:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅದ್ವೈತ್ ಹ್ಯುಂಡೈ ಕಾರ್ ಶೋರೂಮ್, ಮಡಿಕೇರಿ, ಇಲ್ಲಿ ಸೆಪ್ಟೆಂಬರ್, 28 ರಂದು  ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ “ನೇರ ಸಂದರ್ಶನ’ ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಅದ್ವೈತ್ ಹ್ಯುಂಡೈ ಕಾರ್ ಶೋರೂಮ್, ಮಡಿಕೇರಿ. ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

      ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ. ವಯೋಮಿತಿ: 18 ರಿಂದ 35 ವರ್ಷಗಳು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್  8296020826 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.